ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ಮತ್ತೊಮ್ಮೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳನ್ನು ಆದಷ್ಟು ಬೇಗ ಮಾಡಿಸುತ್ತೇವೆ ಎಂದು ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ, ವಿರೋಧ ಪಕ್ಷಗಳ ನಾಯಕರೊಂದಿಗೆ ಈಗಾಗಲೇ ಮಾತಾಡಿದ್ದೇನೆ, ಕೆಲ ಸಲಹೆ ಸೂಚನೆಗಳನ್ನು ಅವರು ನೀಡಿದ್ದಾರೆ, ಆದರೂ ಮತ್ತೊಮ್ಮೆ ನಾವು ಪ್ರತಿಪಕ್ಷಗಳ ನಾಯಕರೊಂದಿಗೆ ಚರ್ಚೆ ಮಾಡಬೇಕಿದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾವುದನ್ನೂ ಮಾಡಲ್ಲ, ನಂತರ ಬಿಬಿಎಂಪಿ ಚುನಾವಣೆಗೆ ಸೂಕ್ತ ಸಮಯ ಯಾವುದು ಅಂತ ನಿರ್ಧರಿಸಬೇಕಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.