ನವದೆಹಲಿ: 1995ರ ಪೀರ್ಜರಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖಂಡ ಹಾಗೂ ಸಂಸದ ಪಪ್ಪು ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
1995 ರಲ್ಲಿ ನಡೆದಿದ್ದ ಪೋರ್ಜರಿ ಕೇಸ್ನಲ್ಲಿ ಪಪ್ಪು ಯಾದವ್ ಭಾಗಿಯಾಗಿದ್ದರು. ಪ್ರಕರಣದ ತನಿಖೆ ಜಾರಿಯಲ್ಲಿದ್ದು, ತನಿಖೆಗೆ ಸಂಬಂಧಿಸಿದಂತೆ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಅವರನ್ನು ಬಂಧಿಸಿದ್ದಾರೆ.
ಪಪ್ಪು ಯಾವದ್ ಬಿಹಾರದ ಪೂರ್ಣಿಯಾ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಕಾಂಗ್ರೆಸ್ ನೇತೃತ್ವದ ಒಕ್ಕೂಟದ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿತ್ತು. ಇದೀಗ ಅವರನ್ನು ಪೊಲೀಸರು ಬಂಧಿಸಿದ್ದಾರೆ.

