ಕಳೆದ ಮೇ ಮತ್ತು ಜೂನ್ ತಿಂಗಳುಗಳ ಗೃಹಲಕ್ಷ್ಮೀ ಯೋಜನೆಯ ಮಾಸಿಕ ತಲಾ 2 ಸಾವಿರ ರೂ. ಹಣ ಫಲಾನುಭವಿಗಳಿಗೆ ಅಂದರೆ ಆಯಾ ಮನೆ ಯಜಮಾನಿಯರ ಬ್ಯಾಂಕ್ ಖಾತೆಗಳಿಗೆ ಮುಂದಿನ 2 ದಿನಗಳ ಒಳಗಾಗಿ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಖಂಡಿತವಾಗಿಯೂ 2 ದಿನಗಳ ಒಳಗಾಗಿ ಮನೆ ಯಜಮಾನಿಯರ ಅಂದರೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಮೇ ಮತ್ತು ಜೂನ್ ತಿಂಗಳುಗಳ 4 ಸಾವಿರ ರೂಪಾಯಿ ಹಣ ಜಮೆ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಆದರೆ ಬಿಜೆಪಿಯವರು ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ಯೋಜನೆ ನಿಲ್ಲುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.