ಬೈಕ್‌ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್
ಬೆಂಗಳೂರು: ಬೈಕ್‌ನಿಂದ ಕೆಳಗೆ ಬಿದ್ದ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದಿದ್ದು, ಆಕೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ನಾಯಂಡನಹಳ್ಳಿ ಬಳಿ ನಡೆದಿದೆ.
ನಾಯಂಡನಹಳ್ಳಿಯ ಮೈಸೂರು ರಸ್ತೆಯಲ್ಲಿ ಮದುವೆ ಮುಗಿಸಿ, ಸಹೋದರ ಜತೆಯಲ್ಲಿ ಬರುತ್ತಿದ್ದ ಕಾಮಾಕ್ಷಿಪಾಳ್ಯದ ನಿವಾಸಿ ಸರೋಜಾ ಎಂಬ 42 ವರ್ಷದ ಮಹಿಳೆ ಬಸ್ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರೊಂದರ ಚಾಲಕ ಏಕಾಏಕಿ ಡೋರ್ ತೆಗೆದಿದ್ದು, ಇದರಿಂದ ಬೈಕ್ ರಸ್ತೆಗೆ ಬಿದ್ದಿದೆ. ಈ ವೇಳೆ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಸರೋಜಾ ರಸ್ತೆಗೆ ಬಿದ್ದಿದ್ದಾರೆ. ಆಗ ಹಿಂದಿನಿAದ ಬಂದ ಬಿಎಂಟಿಸಿ ಬಸ್ ಸರೋಜಾ ಅವರ ಮೇಲೆ ಹರಿದಿದೆ.
ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆಯುವ ಸಂಬAಧ ಪೊಲೀಸರು ಸಿದ್ಧತೆ ನಡೆಸಿದ್ದಾರೆ.


