ಕಲಬುರಗಿ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ದರೋಡೆಕೋರನೊಬ್ಬನ ಮೇಲೆ ಗುಂಡು ಹಾರಿಸಿ ಆತನನ್ನು ಬಂದಿಸಲಾಗಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ತಿಳಿಸಿದ್ದಾರೆ.
ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದ ಇಮ್ತಿಯಾಜ್ ಗಿಣಿ ಎಂಬ ವ್ಯಕ್ತಿ, ನಗರದ ಬೀದಿಯಲ್ಲಿ ಓಡಾಡ್ತಿದ್ದ ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲು ಉಪನಗರದ ಪೊಲೀಸ್ ಠಾಣೆಯ ಪಿಎಸ್‌ಐ ತೆರಳಿದ್ದರು.
ಸಿಬ್ಬಂದಿಯ ಸೂಚನೆಗೆ ಬಗ್ಗದ ಆರೋಪಿ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದ. ಈ ಹಿನ್ನೆಲೆಯಲ್ಲಿ ಪಿಎಸ್‌ಐ ಆತನ ಕಾಲಿಗೆ ಗುಂಡುಹಾರಿಸಿ, ಆತನನ್ನು ಬಂಧಿಸಿದ್ದಾರೆ. ಇಮ್ತಿಯಾಜ್ ಗಿಣಿಮೇಲೆ 10 ಕ್ಕೂ ಹೆಚ್ಚು ಪ್ರಕರಣಗಳಿವೆ.
ಇಮ್ತಿಯಾಜ್ ಮೇಲೆ ಕಲಬುರಗಿ ಮಾತ್ರವಲ್ಲದೆ, ಬೀದರ್ ಮತ್ತು ಹೈದರಾಬಾದ್‌ನಲ್ಲೂ ಕೇಸ್ ಇದ್ದು, ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಆತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಡಾ. ಶರಣಪ್ಪ ತಿಳಿಸಿದ್ದಾರೆ.