ಲಕ್ನೋ: ಪ್ರಯಾಗ್ ರಾಜ್‌ನ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ಉತ್ತರ ಪ್ರದೇಶದ ಸಿಎಂ ಯೋಗಿ ಅದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.
ಮೌನಿ ಅಮವಾಸ್ಯೆಯ ಅಂಗವಾಗಿ ಆಯೋಜನೆಯಾಗಿದ್ದ ಪವಿತ್ರ ಕುಂಭಸ್ನಾನದ ವೇಳೆ ಬುಧವಾರ ಬೆಳಗ್ಗಿನ ಜಾವ ನಡೆದ ಕಾಲ್ತುಳಿತದಲ್ಲಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗಿದೆ.
ಕರ್ನಾಟಕದ ನಾಲ್ವರು ಭಕ್ತರು ಸೇರಿದಂತೆ 30 ಭಕ್ತರು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ನೂರಕ್ಕೂ ಅಧಿಕ ಜನ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗಿದೆ.
10 ಕೋಟಿ ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಅಮಾವಾಸ್ಯೆಯ ಕುಂಭಸ್ನಾನಕ್ಕೆ ಸಾಕಷ್ಟು ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೂ ಇಂತಹ ದುರಂತ ನಡೆಯಲು ಕಾರಣವೇನು ಎಂಬ ಕುರಿತು ತನಿಖೆಯಾಗಬೇಕು ಎಂದು ಒತ್ತಾಯ ಕೇಳಿಬಂದಿತ್ತು. ಹೀಗಾಗಿ ನ್ಯಾಯಾಂಗ ತನಿಖೆಗೆ ವಹಿಸಲಾಗಿದೆ.