ಸುದ್ದಿ

ಚಳಿಗೆ ಜಗ್ಗದ ಚೆನ್ನಮ್ಮಂದಿರು : ನಿಲ್ಲದ ಅಂಗನವಾಡಿ ಅಮ್ಮಂದಿರ ಪ್ರತಿಭಟನೆ

Share It

ಬೆಂಗಳೂರು: ಚಳಿಗೂ ಜಗ್ಗದೆ ಕಳೆದ ಮೂರು ದಿನಗಳಿಂದ ಅಂಗನವಾಡಿ ಅಮ್ಮಂದಿರು ಫ್ರೀಂಡA ಪಾರ್ಕ್ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಸರಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ.

ಮೂರು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಸರಕಾರ ನಮ್ಮ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಯಾರೊಬ್ಬ ಸಚಿವರು ಬಂದು ನಮ್ಮ ಸಮಸ್ಯೆ ಆಲಿಸಿಲ್ಲ, ಜತೆಗೆ ಸರಕಾರ ಪೊಲೀಸರ ಮೂಲಕ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಪೊಲೀಸರು ಶಾಮಿಯಾನ ತೆರವು ಮಾಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಮಾಡಿರುವ ಪ್ರತಿಭಟನಾನಿರತರು, ನಾಳೆ ಖಾಲಿ ಮಾಡದಿದ್ದರೆ ಎಫ್‌ಐಆರ್ ದಾಖಲಿಸುವ ಬೆದರಿಕೆ ಹಾಕಿದ್ದಾರೆ. ಪ್ರತಿಭಟನೆಯಲ್ಲಿ ಮಹಿಳೆಯರೇ ಇದ್ದರೂ ಯಾವುದೇ ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ದೂರಿದರು.

ಒಲಿದರೆ ನಾರಿ, ಮುನಿದರೆ ಮಾರಿ ಎಂಬುದನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಡುತ್ತೇವೆ. ನಮ್ಮ ಬೇಡಿಕೆ ಈಡೇರಿಸುವವರೆಗೆ ನಾವು ಪ್ರತಿಭಟನೆ ನಿಲ್ಲಿಸುವುದಿಲ್ಲ. ಸರಕಾರ ಅದನ್ನು ಹತ್ತಿಕ್ಕಲು ಏನೇ ಪ್ರಯತ್ನ ನಡೆಸಿದರೂ ನಾವು ಕುಗ್ಗುವ ಮಾತೇ ಇಲ್ಲ ಎಂದು ಪ್ರತಿಭಟನಾನಿರತ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.

ನಾಳೆ ಮತ್ತಷ್ಟು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆಗೆ ಆಗಮಿಸುವ ನಿರೀಕ್ಷೆಯಿದೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ಕಾರ್ಯಕರ್ತರು ಪ್ರತಿಭಟನೆಗೆ ಕೂಡಿಕೊಳ್ಳಲಿದ್ದಾರೆ. ಹೋರಾಟವನ್ನು ಮತ್ತಷ್ಟು ತೀವ್ರ ಸ್ವರೂಪಕ್ಕೆ ಕೊಂಡೊಯ್ಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.


Share It

You cannot copy content of this page