ಬೆಂಗಳೂರು: ಕಟ್ಟಡ ನಿರ್ಮಾಣದಲ್ಲಿ ಸುರಕ್ಷತೆ ವೈಫಲ್ಯದಿಂದಾಗಿ ದಾರಿಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿ ಮೇಲೆ ಸೆಂಟ್ರಿಂಗ್ ಪೋಲ್ ಕುಸಿದುಬಿದ್ದಿದ್ದು, ವಿದ್ಯಾರ್ಥಿಯೊಬ್ಬಳು ಸಾವನ್ನಿರುವ ಘಟನೆ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ತೇಜಸ್ವಿನಿ ತನ್ನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುವ ವೇಳೆ ಕಟ್ಟಡ ಸೆಂಟ್ರಿಂಗ್ ಪೋಲ್ ಕುಸಿದಿದೆ. ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ನಿಮ್ಹಾನ್ಸ್ ಗೆ ಕರೆದೊಯ್ಯುವ ವೇಳೆ ಆಕೆ ಸಾವನ್ನಪ್ಪಿದ್ದಾರೆ. ಇದೀಗ ಆಕೆಯ ಶವವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ.
ಈ ನಡುವೆ ಕಟ್ಟಡ ಮಾಲೀಕರ ನಿರ್ಲಕ್ಷö್ಯದ ವಿರುದ್ಧ ವಿದ್ಯಾರ್ಥಿಯ ತಂದೆ ಸುಧಾಕರ್ ರಾವ್ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಕಟ್ಟಡ ಮಾಲೀಕ, ಗುತ್ತಿಗೆದಾರ, ಸೈಟ್ ಎಂಜಿನಿಯರ್ ಹಾಗೂ ಸಂಬAಧಿಸಿದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದಾರೆ.