ಗುತ್ತಿಗೆದಾರರಿಂದ ಸಿಎಂ ಭೇಟಿ: ಬಾಕಿ ಬಿಲ್ ಪಾವತಿಗೆ ಮನವಿ
ಬೆಂಗಳೂರು: ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಾಕಿಯಿರುವ ಬಿಲ್ ಪಾವತಿ ಮಾಡುವಂತೆ ಮನವಿ ಮಾಡಿಕೊಂಡರು.
ಕಳೆದ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗಿನಿಂದಲೂ ಬಿಲ್ ಬಾಕಿಯಿದೆ. ಇದರಿಂದ ಆರ್ಥಿಕ ಸಮಸ್ಯೆ ಜಾಸ್ತಿಯಾಗಿದೆ. ಗುತ್ತಿಗೆದಾರರು ಆತ್ಮಹತ್ಯೆಯ ಹಾದಿ ತುಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಮನಗಂಡು ಬಾಕಿ ಬಿಲ್ ಪಾವತಿ ಮಾಡಿ ಎಂದು ಮನವಿ ಮಾಡಿಕೊಂಡರು.
ಗುತ್ತಿಗೆದಾರರ ಮನವಿ ಆಲಿಸಿದ ಸಿಎಂ ಸಿದ್ದರಾಮಯ್ಯ ಹಂತಹAತವಾಗಿ ಬಾಕಿ ಬಿಲ್ ಪಾವತಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು. ಈ ಸಂಬAಧ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಲಾಗುವುದು ಎಂಧು ಭರವಸೆ ನೀಡಿದರು.


