ಉಪಯುಕ್ತ ಸುದ್ದಿ

ಕ್ರೀಡಾಪಟುಗಳಿಗೆ ಸರಕಾರದ ಗುಡ್‌ನ್ಯೂಸ್ : ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆ ನೇಮಕದಲ್ಲಿ ಮೀಸಲಾತಿ ಹೆಚ್ಚಳ

Share It

ಬೆಂಗಳೂರು: ಕ್ರೀಡಾಪಟುಗಳಿಗೆ ಕರ್ನಾಟಕ ಸರಕಾರ ಗುಡ್ ನ್ಯೂಸ್ ನೀಡಿದ್ದು, ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್ಟೇಬಲ್‌ನಿಂದ ಡಿವೈಎಸ್‌ಪಿವರೆಗೆ ಹುದ್ದೆಗಳ ನೇಮಕದಲ್ಲಿ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ

ಈಗ ಈ ಮೀಸಲಾತಿ ಪ್ರಮಾಣ ಶೇ.2 ರಷ್ಟಿದ್ದು ಇದನ್ನು ಶೇ.3ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಡಿವೈಎಸ್‌ಪಿ ಹುದ್ದೆಯ ವಯೋಮಿತಿ ಕಾಲಂನಲ್ಲಿ ಎಸ್‌ಸಿ/ಎಸ್‌ಟಿ ಹಾಗೂ ಕೆಟಗರಿ-1 ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ನಿಯಮಗಳಿಗೆ ತಿದ್ದುಪಡಿ ತರಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು (ಪೊಲೀಸ್ ಕಾನ್ಸ್ಟೇಬಲ್, ಪೊಲೀಸ್ ಸಬ್-ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಉಪಾಧೀಕ್ಷಕರ ಹುದ್ದೆಗೆ ಪ್ರತಿಭಾವಂತ ಕ್ರೀಡಾಪಡುಗಳ ನೇರ ನೇಮಕಾತಿ) (ವಿಶೇಷ) (ತಿದ್ದುಪಡಿ) ನಿಯಮಗಳು ೨೦೨೫ರ ಕರಡು ನಿಯಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿತ್ತು.


Share It

You cannot copy content of this page