ಅಪರಾಧ ಸುದ್ದಿ

ಮಂಗಳೂರು ದರೋಡೆ ಪ್ರಕರಣದ ಆರೋಪಿಗಳ ಬಂಧನ

Share It

ಮಂಗಳೂರು : ನಗರದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿಎಂ ಕಾರ್ಯಕ್ರಮ ಮಂಗಳೂರಿನಲ್ಲಿದ್ದ ದಿನವೇ ದರೋಡೆಕೋರರು ಹಾಡುಹಗಲೇ ಬ್ಯಾಂಕ್‌ಗೆ ನುಗ್ಗಿ ಕೋಟ್ಯಂತರ ರುಪಾಯಿ ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ನಂತರ ಕಾರಿನಲ್ಲಿ ಕೇರಳ ಮೂಲಕ ಪರಾರಿಯಾಗಿದ್ದರು.

ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸರು ಎಂಟು ತಂಡಗಳನ್ನು ರಚನೆ ಮಾಡಿ ರಾಜ್ಯವ ವಿವಿಧ ಭಾಗಗಳಲ್ಲಿ ಹಾಗೂ ಕೇರಳ ಮತ್ತು ತಮಿಳುನಾಡಿನಲ್ಲಿ ಕಾರ್ಯಾಚರಣೆ ನಡೆಸಿದ್ದರು. ಇದೀಗ ಆರೋಪಿಗಳನ್ನು ತಮಿಳುನಾಡಿದ ತಿರುವನವ್ವೇಲಿಯಲ್ಲಿ ಬಂಧಿಸಲಾಗಿದೆ.

ಬಂಧಿತರಿಂದ ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಜತೆಗೆ, ದರೋಡೆ ಮಾಡಿದ ಚಿನ್ನಾಭರಣ ಹಾಗೂ ಹಣದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ಬಗ್ಗೆಯೂ ವಿಚಾರಣೆ ನಡೆಯುತ್ತಿದೆ.

ಆರೋಪಿಗಳಿಂದ ಎರಡು ಗೋಣಿಚೀಲ, ಎರಡು ಪಿಸ್ತೂಲ್, ಲಾಂಗ್ ಸೇರಿದಂತೆ ಅನೇಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ದರೋಡೆಗೆ ಬಳಸಿದ್ದ ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಬಂಧಿತ ಆರೋಪಿಗಳೆಲ್ಲರೂ ತಮಿಳುನಾಡಿನ ತಿರುನವ್ವೇಲಿ ಮೂಲದವರು ಎಂದು ಹೇಳಲಾಗಿದೆ. ಇವರೆಲ್ಲರೂ ಯೋಜಿತವಾಗಿ ಬ್ಯಾಂಕ್ ದರೋಡೆ ಮಾಡಿದ್ದು, ದರೋಡೆಗೆ ಬ್ಯಾಂಕ್ ಸಿಬ್ಬಂದಿ ಅಥವಾ ಸ್ಥಳೀಯರು ಸಹಕಾರ ನೀಡಿದ್ದಾರಾ ಎಂಬ ಬಗ್ಗೆ ಇದೀಗ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.


Share It

You cannot copy content of this page