ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕೆಎಫ್‌ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಕಾಟ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಉಲ್ಭಣವಾಗಿದ್ದು, ಒಂದೇ ದಿನ ನಾಲ್ಕು ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 18 ಕ್ಕೇರಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎನ್.ಆರ್ ಪುರದಲ್ಲಿ ಇಂದು ನಾಲ್ವರಿಗೆ ಮಂಗನ ಕಾಯಿಲೆ ಕಾಣಿಸಿಕೊಂಡಿದೆ ಎಂಬುದು ಆರೋಗ್ಯ ಇಲಾಖೆಯ ಪರೀಕ್ಷೆಯಿಂದ ದೃಢಪಟ್ಟಿದೆ.
ಕಾಡಂಚಿನ ಗ್ರಾಮಗಳಿಗೆ ಆಗಮಿಸಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಗ್ರಾಮಸ್ಥರು ಕಾಡಿಗೆ ತೆರಳದಂತೆ ಸೂಚನೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಗ್ರಾಮಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ರಕ್ತದ ಮಾದರಿ ಸಂಗ್ರಹ ಮಾಡಿದ್ದಾರೆ. ಕೊಪ್ಪದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್ಗಳನ್ನು ತೆರೆಯಲಾಗಿದೆ.