ಬೆಂಗಳೂರು: ಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ಸ್ನಾನ ಮಾಡುತ್ತಿರುವ ಫೋಟೋ ವೈರಲ್ ಆಗಿದ್ದು, ನಕಲಿ ಫೋಟೋ ತಯಾರಿಸಿ ಹಂಚಿದ ಆರೋಪದಲ್ಲಿ ದೂರು ದಾಖಲಿಸಿದ್ದಾರೆ.
ನಟ ಪ್ರಕಾಶ್ ರೈ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತಗಳನ್ನು ಟೀಕೆ ಮಾಡುತ್ತಲೇ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಕೂಡ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ ಎಂಬAತೆ ಬಿಂಬಿಸಿ ಕಿಡಿಗೇಡಿಗಳು ಫೋಟೋ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್, ನಾನು ಕುಂಭಸ್ನಾನದಲ್ಲಿ ಭಾಗವಹಿಸಿಲ್ಲ. ಆದರೂ, ನನ್ನ ಫೋಟೋ ಹರಿದಾಡುತ್ತಿದೆ. ಇದರ ವಿರುದ್ಧ ನಾನು ಪೊಲೀಸ್ ಠಾಣೆ ಮೆಟ್ಟಿಲೇರಿದ್ದೇನೆ. ಅಲ್ಲಿ ಏನಾಗುತ್ತೋ ನೋಡೋಣ ಎಂದು ಟ್ವೀಟ್ ಮಾಡಿದ್ದಾರೆ.