ಬೆಂಗಳೂರು: ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಹಾಗೂ ಸದಸ್ಯ ಮಹಮದ್ ರಿಜ್ವಾನ್ ನವಾಬ್ ಅವರನ್ನು ಕೆಎಸ್ ಆರ್ ಟಿಸಿ ಉಪಾಧ್ಯಕ್ಷ ರನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಅಧಿಕೃತ ಸುತ್ತೋಲೆ ಹೊರಡಿಸಿರುವ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು, ರಿಜ್ವಾನ್ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿರುವ ಕುರಿತು ದೃಢಪಡಿಸಿದ್ದಾರೆ.
ಗುರಪ್ಪನ ಪಾಳ್ಯ ವಾರ್ಡ್ ನ ಬಿಬಿಎಂಪಿ ಸದಸ್ಯರಾಗಿದ್ದ ರಿಜ್ವಾನ್, ಕಳೆದ ಕಾಂಗ್ರೆಸ್ ಅಧಿಕಾರವಧಿಯಲ್ಲಿ ಒಮ್ಮೆ ಆಡಳಿತ ಪಕ್ಷದ ನಾಯಕರಾಗಿ ಕೂಡ ಕೆಲಸ ಮಾಡಿದ್ದರು. ಇದೀಗ ಸರಕಾರ ಅವರನ್ನುKSRTC ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸಿದೆ.