ಉಪಯುಕ್ತ ಸುದ್ದಿ

ಇಂದು ಭಾರತ್ ಬಂದ್: ಶಾಲಾ-ಕಾಲೇಜುಗಳಿಗೆ ರಜೆ ?

Share It

ಹೊಸದಿಲ್ಲಿ : ಒಳಮೀಸಲಾತಿ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ನಾಳೆ ಬುಧವಾರ ಆಗಸ್ಟ್ 21 ರಂದು ಭಾರತ್ ಬಂದ್ ಗೆ ಕರೆ ನೀಡಿದೆ.

ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಭದ್ರತೆ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳ ಪೊಲೀಸ್ ಇಲಾಖೆಗಳಿಗೆ ಸೂಚಿಸಿದೆ.‌ ಆದರೆ, ಉತ್ತರಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಆದಾಗ್ಯೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರತ್ ಬಂದ್ ಎಫೆಕ್ಟ್ ಕಡಿಮೆ ಇರಲಿದೆ ಎಂದು ಅಂದಾಜಿಸಲಾಗಿದೆ. ಬುಧವಾರ ಶಾಲಾ-ಕಾಲೇಜುಗಳು, ಬ್ಯಾಂಕ್ ಗಳು ಸೇರಿ ಎಲ್ಲಾ ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಪ್ರತಿಭಟನೆ ಸ್ವರೂಪ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುತ್ತದೆ. ಪ್ರತಿಭಟನೆ ಹೆಚ್ಚಾದರೆ, ಪರಿಸ್ಥಿತಿ ನೋಡಿಕೊಂಡು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಕುರಿತು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.


Share It

You cannot copy content of this page