ಬೆಂಗಳೂರು: ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವೈರಲ್ ಆಗಿರುವ ಫೋಟೋ ಸಂಬಂಧ ತನಿಖೆ ನಡೆಸಲು ರಾಜ್ಯ ಕಾರಾಗೃಹ ಇಲಾಖೆ ಆದೇಶಿಸಿದೆ.
ಈ ಕುರಿತು ತನಿಖೆಗೆ ಆದೇಶ ನೀಡಿರುವ ಕಾರಾಗೃಹ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ, ಪೊಲೀಸ್ ಅಧಿಕಾರಿಗಳಾದ ಆನಂದ್ ರೆಡ್ಡಿ ಮತ್ತು ಸೋಮಶೇಖರ್ ಅವರನ್ನೊಳಗೊಂಡ ತಂಡವನ್ನು ರಚನೆ ಮಾಡಿದ್ದಾರೆ. ಈ ಇಬ್ಬರು ಅಧಿಕಾರಿಗಳ ನೇತೃತ್ವದಲ್ಲಿ ಜೈಲಿಗೆ ಭೇಟಿ ನೀಡಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ಆನಂದ್ ರೆಡ್ಡಿ ಮತ್ತು ಸೋಮಶೇಖರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ತನಿಖೆ ನಡೆಸಲಿದ್ದು, ನಂತರ ವರದಿಯಲ್ಲಿ ಕಾರಾಗೃಹ ಇಲಾಖೆಯ ಡಿಜಿಪಿ ಶಾಲಿನಿ ಕೃಷ್ಣಮೂರ್ತಿ ಅವರಿಗೆ ಸಲ್ಲಿಕೆ ಮಾಡಲಿದ್ದಾರೆ. ಇದಕ್ಕೆ ಅಗತ್ಯವಿರುವ ಸಹಕಾರ ನೀಡುವಂತೆ ಪೊಲೀಸರಿಗೆ ಮತ್ತು ಪರಪ್ಪನ ಅಗ್ರಹಾರ ಜೈಲಿನ ಮೇಲ್ವಿಚಾರಕರಿಗೆ ಸೂಚನೆ ನೀಡಲಾಗಿದೆ.