ಬೆಂಗಳೂರು: ಸಿಎಂ ಬದಲಾವಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೂಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
ಮೂಡಾ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಸಂಸ್ಥೆ ನಡೆಸುತ್ತಿದೆ. ಈ ನಡುವೆ ಲೋಕಾಯುಕ್ತ ತನಿಖೆಯ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ ಅನುಮಾನ ವ್ಯಕ್ತಪಡಿಸಿದ್ದು, ಸಿಬಿಐ ತನಿಖೆಗೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
ಬೆಳಗ್ಗೆ11 ಗಂಟೆಗೆ ಅರ್ಜಿಯ ವಿಚಾರಣೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದ್ದು, ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.
ಸರಕಾರದ ಪರವಾಗಿ ಕಪಿಲ್ ಸಿಬಲ್, ಕಿರಣ್ ಶೆಟ್ಟಿ ವಾದ ಮಂಡನೆ ಮಾಡಲಿದ್ದು, ಸ್ನೇಹಮಯಿ ಕೃಷ್ಣ ಪರ ವಕೀಲರು ಸಿಬಿಐ ತನಿಖೆಗೆ ಕೊಡಲು ಅಗತ್ಯವಿರುವ ಅಂಶಗಳ ಬಗ್ಗೆ ಉಲ್ಲೇಖ ಮಾಡಲಿದ್ದಾರೆ. ಒಂದು ವೇಳೆ ನ್ಯಾಯಾಲಯ ಸಿಬಿಐ ತನಿಖೆಯನ್ನು ಒಪ್ಪಿದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಿಸುವ ಬಿಜೆಪಿಯ ಪ್ರಯತ್ನ ಜೋರಾಗಲಿದೆ.