ನವದೆಹಲಿ: ದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತಕ್ಕೆ ಐವರು ಮಕ್ಕಳು 9 ಮಹಿಳೆಯರು ಬಲಿಯಾಗಿದ್ದಾರೆ. ಮೃತಪಟ್ಟವರಲ್ಲಿ ಬಿಹಾರ ರಾಜ್ಯದ 9 ಜನ ಸೇರಿ ವಿವಿಧ ರಾಜ್ಯದ ಪ್ರಯಾಣಿಕರು ಇದ್ದಾರೆ ಎನ್ನಲಾಗಿದೆ.
ಗಾಯಾಳುಗಳೀಗೆ ಎಲ್‌ಎನ್‌ಜಿಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೃತದೇಹಗಳನ್ನು ಶವಾಗಾರದಲ್ಲಿರಿಸಲಾಗಿದೆ. ಶವಪರೀಕ್ಷೆಯ ನಂತರ ಮೃತರ ವಿವರ ಪಡೆದು, ಕುಟುಂಬಗೆ ಹಸ್ತಾಂತರ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಗ್ ರಾಜ್ ಗೆ ತೆರಳು ಹೊರಟಿದ್ದ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ಕಾಲ್ತುಳಿತ ಸಂಭವಿಸಿದೆ. ದೆಹಲಿ ನಿಲ್ದಾಣದ ಫ್ಲಾಟ್ ಫಾರ್ಮ್ 14, 15 ರಲ್ಲಿ ದುರ್ಘಟನೆ ನಡೆದಿದ್ದು, ರಕ್ಷಣಾ ಕಾರ್ಯ ಪೂರ್ಣಗೊಂಡಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎನ್‌ಡಿಆರ್‌ಎಫ್ ಮಾಹಿತಿ ನೀಡಿದೆ.