ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಗೆ ಅವಕಾಶ ಕಲ್ಪಿಸಿರುವ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ ನಡೆಸುವಾಗಲೇ ಹೃದಯಾಘಾತ ದಿಂದ ಕಾಂಗ್ರೆಸ್ ಮುಖಂಡರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಪ್ರೆಸ್ಕ್ಲಬ್ನಲ್ಲಿ ನಡೆದಿದೆ.
ಕೋಲಾರ ಮೂಲದ ರವಿಚಂದ್ರನ್ ಆರ್.ಆರ್.ನಗರದ ಚನ್ನಸಂದ್ರದಲ್ಲಿ ನೆಲೆಸಿದ್ದರು. ಖಾಸಗಿ ಶಾಲೆ ನಡೆಸುತ್ತಿದ್ದ ಇವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿದ್ದರು. ಹೀಗಾಹಿ, ಇಂದು ನಡೆದ ರಾಜ್ಯ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಂಘ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ವೇಳೆಯೇ ಘಟನೆ ನಡೆದಿದ್ದು, ಕೂಡಲೇ ಕನ್ನಿಂಗ್ ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು. ಅವರ ಕುಟುಂಬದ ಜತೆಗೆ ನಾವೆಲ್ಲ ಇದ್ದೇವೆ ಎಂದು ಭರವಸೆ ನೀಡಿದ್ದಾರೆ.

