ರಾಮಗಿರಿ, ಅಮೃತಾಪುರ ರೈಲ್ವೆ ನಿಲ್ದಾಣಗಳಲ್ಲಿ 4 ರೈಲುಗಳ ನಿಲುಗಡೆ

IMG-20240901-WA0000
Share It

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಮತ್ತು ಅಮೃತಾಪುರ ರೈಲ್ವೆ ನಿಲ್ದಾಣಗಳಲ್ಲಿ ಪ್ಯಾಸೆಂಜರ್ ರೈಲುಗಳನ್ನು ನಿಲ್ಲಿಸಲು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಒಪ್ಪಿಕೊಂಡಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಈ ಬಗ್ಗೆ ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಸಂಸದನಾಗಿ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ, ಅಮೃತಾಪುರ ರೈಲ್ವೆ ನಿಲ್ದಾಣಗಳಲ್ಲಿ ಪ್ಯಾಸೆಂಜರ್ ರೈಲುಗಳನ್ನು ನಿಲ್ಲಿಸಲು ಅಲ್ಲಿನ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು.

ಈ ಬಗ್ಗೆ ನಾನು ಈಗಾಗಲೇ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದೇನೆ. ಕೇಂದ್ರ ರೈಲ್ವೆ ಸಚಿವರು ಈ ಮನವಿಗೆ ಸ್ಪಂದಿಸಿ, ಈ ಮಾರ್ಗದಲ್ಲಿ ಸಂಚರಿಸುವ 9 ರೈಲುಗಳ ಪೈಕಿ 4 ರೈಲುಗಳನ್ನು ನಿಲ್ಲಿಸಲು ಒಪ್ಪಿಕೊಂಡಿದ್ದಾರೆ, ಇದರಿಂದ ಈ ಎರಡೂ ರೈಲ್ವೆ ನಿಲ್ದಾಣಗಳ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಬಹಳ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು.


Share It

You cannot copy content of this page