ಬೆಂಗಳೂರು: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ, ತಮ್ಮ ಉತ್ತರಾಧಿಕಾರಿಯಾಗಿ ಸಂಜಿವ್ ಖನ್ನಾ ಹೆಸರನ್ನು ಸಿಜೆಐ ಡಿವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ.
ಸಿಜೆಐ ಚಂದ್ರಚೂಡ್ ಅವರು ನವೆಂಬರ್ 10ರಂದು ಅಧಿಕಾರದಿಂದ ನಿವೃತ್ತರಾಗುತ್ತಿರುವುದರಿಂದ, ನ್ಯಾಯಮೂರ್ತಿ ಖನ್ನಾ ತಮ್ಮ ಉತ್ತರಾಧಿಕಾರಿಯಾಗಬೇಕು ಎಂದು ಕೇಂದ್ರಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ನ್ಯಾಯಮೂರ್ತಿಯಾಗಿ ಎರಡು ವರ್ಷಗಳ ಅಧಿಕಾರಾವಧಿ ಪೂರೈಸಿದ ನಂತರ ನವೆಂಬರ್ 10 ರಂದು ನಿವೃತ್ತರಾಗಲಿದ್ದಾರೆ. ಅವರು ಡಿಸೆಂಬರ್ 17, 2022 ರಂದು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್ ನ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಾಗಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು 2025ರ ಮೇನಲ್ಲಿ ನಿವೃತ್ತಿ ಹೊಂದಲಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನಾಯಮೂರ್ತಿಯಾಗಿದ್ದ ಯುಯು ಲಲಿತ್ ಅವರ ನಿವೃತ್ತಿ ನಂತರ ಡಿವೈ ಚಂದ್ರಚೂಡ್ ಅವರು 2022ರ ನವೆಂಬರ್ 9ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನವೆಂಬರ್ 10, 2024 ರಿಂದ ಮೇ 13, 2025 ರವರೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುವ ನಿರೀಕ್ಷೆಯಿದೆ. ಖನ್ನಾ ಅವರು 14 ವರ್ಷ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದರು. ಅವರು ತೆರಿಗೆ, ವಾಣಿಜ್ಯ ಕಾನೂನುಗಳಲ್ಲಿ ತಮ್ಮ ಪರಿಣತಿ ಹೊಂದಿದ್ದಾರೆ.