ರಾಜಕೀಯ ಸುದ್ದಿ

ಮೂಡಾ ಹಗರಣ: ಎಫ್ಐಆರ್ ದಾಖಲಿಸಲು ಲೋಕಾಯುಕ್ತಕ್ಕೆ ದೂರು

Share It


ಬೆಂಗಳೂರು: ಮೂಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕು ಎಂದು ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮವಾಗಿ ನಿವೇಶನ ಪಡೆದ ಸಂಬಂಧ ರಾಜ್ಯಪಾಲರು ಈಗಾಗಲೇ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕು ಎಂಬುದು ಎನ್.ಆರ್. ರಮೇಶ್ ಒತ್ತಾಯವಾಗಿದೆ.

ಭ್ರಷ್ಟಾಚಾರ, ಅಧಿಕಾರ ದುಬರ್ಳಕೆ, ನಕಲಿ ದಾಖಲಾತಿ ಸೃಷ್ಟಿ ಹಿನ್ನೆಲೆಯಲ್ಲಿ ಮುಡಾದಿಂದ 14 ನಿವೇಶನಗಳನ್ನು ಪಡೆದು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಮುಡಾ ಹಗರಣದಲ್ಲಿ ರಾಜ್ಯಪಾಲರು ಆ. 17ರಂದು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದರಂತೆ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ.


Share It

You cannot copy content of this page