ಸಾಲಗಾರರ ಕಿರುಕುಳವೇ : ಸರಕಾರದ ಸಹಾಯವಾಣಿಗೆ ಕರೆ ಮಾಡಿ !

Share It

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗುತ್ತಿದ್ದಂತೆ ಸಂತ್ರಸ್ತರ ಸಹಾಯಕ್ಕೆ ಸರಕಾರ ಮುಂದಾಗಿದ್ದು, ಸಹಾಯವಾಣಿಯನ್ನು ಆರಂಭಿಸಿದೆ.

ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು, ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಇದರ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಕಚೇರಿ ತಿಳಿಸಿದೆ.

ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ 112 ಅಥವಾ 1902 ಸಂಖ್ಯೆಗೆ ದೂರು ನೀಡಬಹುದು ಎಂದು ಸಿಎಂ ಕಚೇರಿ ಅಧಿಕೃತ ಮಾಹಿತಿ ನೀಡಿದೆ.


Share It

You May Have Missed

You cannot copy content of this page