ರಾಜಕೀಯ ಸುದ್ದಿ

ಬಿಜೆಪಿ ಆಡಳಿತದಲ್ಲಿ ಆಗಿರುವ ಭ್ರಷ್ಟಾಚಾರದ ತನಿಖೆ ನಡೆಸಲು ಸಮಿತಿ ರಚನೆ

Share It

ಬೆಂಗಳೂರು: ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಅಕ್ರಮಗಳು ಸೇರಿ ಒಟ್ಟು 26 ಹಗರಣಗಳ ಕುರಿತು ತನಿಖೆ ನಡೆಸಲು ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ.

ಮುಡಾ ಪ್ರಕರಣ ಸೇರಿದಂತೆ ಕಾಂಗ್ರೆಸ್ ನ ಹಲವು ಸದಸ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಬಿಜೆಪಿ ಆಡಳಿತದಲ್ಲಿ ನಡೆದಿರುವ ಪ್ರಕರಣಗಳನ್ನು ಹೊರತರಲು 5ಮಂದಿಯ ಸಮಿತಿ ರಚಿಸಿದ್ದಾರೆ.
ಸಮಿತಿಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಸಂತೋಷ್ ಲಾಡ್ ಇದ್ದಾರೆ ಎನ್ನಲಾಗಿದೆ.

ಎರಡು ತಿಂಗಳೊಳಗೆ ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಗೆ ಸೂಚಿಸಿದ್ದಾರೆ ಎಂದು ಪರಮೇಶ್ವರ್ ಮಾಹಿತಿ ನೀಡಿದ್ದಾರೆ.


Share It

You cannot copy content of this page