ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಗಣ್ಯರು
ನವದೆಹಲಿ: ಪೂಜ್ಯ ಬಾಪು ಅವರ ಜನ್ಮದಿನದಂದು ಎಲ್ಲಾ ದೇಶವಾಸಿಗಳ ಪರವಾಗಿ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಸತ್ಯ, ಸಾಮರಸ್ಯ ಮತ್ತು ಸಮಾನತೆಯ ಆಧಾರದ ಮೇಲೆ ಅವರ ಜೀವನ ಮತ್ತು ಆದರ್ಶಗಳು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನ ಅಂಗವಾಗಿ ರಾಜ್ಘಾಟ್ನಲ್ಲಿರುವ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿ ಸಿಎಂ ಆತಿಶಿಸೇರಿದಂತೆ ಹಲವು ಗಣ್ಯರು ರಾಜ್ಘಾಟ್ನಲ್ಲಿರುವ ಗಾಂಧೀಜಿ ಅವರ ಸಮಾಧಿಗೆ ನಮನ ಸಲ್ಲಿಸಿದರು.


