ರಾಜಕೀಯ ಸುದ್ದಿ

ನಿಶ್ಚಯ್ ಚಂದ್ರಶೇಖರ್ ಗೆ ಪದ್ಮನಾಭ ನಗರ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆ 

Share It

ಬೆಂಗಳೂರು: ಪದ್ಮನಾಭ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಚಯ್ ಚಂದ್ರಶೇಖರ್ ಅವರನ್ನು ನೇಮಿಸಲಾಯಿತು. 

ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆಯಾದ ನಿಶ್ಚಯ್ ಅವರನ್ನು ಪದ್ಮನಾಭ ನಗರ ಶಾಸಕ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅಭಿನಂದಿಸಿ, ಆಯ್ಕೆಯ ಪ್ರಮಾಣ ಪತ್ರವನ್ನು ವಿತರಣೆ ಮಾಡಿದರು. ಪಕ್ಷ ಸಂಘಟನೆಯಲ್ಲಿ ಉತ್ತಮವಾಗಿ ಕೆಲಸ ಮಾಡುವಂತೆ ಹಾರೈಸಿದರು. 

ನಿಶ್ಚಯ್ ಚಂದ್ರಶೇಖರ್ ಅವರು, ಕಳೆದ ಅನೇಕ ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ಅನೇಕ ಕಾರ್ಯಕ್ರಮಗಳ ಸಂಘಟನೆ ಮಾಡುವಲ್ಲಿ ಪಾತ್ರವಹಿಸಿದ್ದಾರೆ. ಬೆಂಗಳೂರು ದಕ್ಷಿಣ ಯುವ ಬಿಜೆಪಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಅವರು ನಿಶ್ಚಯ್ ಅವರನ್ನು ಅಭಿನಂದಿಸಿದ್ದಾರೆ. 


Share It

You cannot copy content of this page