ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪರಿಷ್ಕರಣೆ ಅಕ್ರಮದಲ್ಲಿ ಜೈಲಿನಲ್ಲಿರುವ ಸಿಎಂ ಅರವಿಂದ್ ಕೇಜ್ರೀವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಪ್ರತ್ಯೇಕ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿತ್ತು. ಈ ವೇಳೆ ಸಿಎಂ ಕೇಜ್ರೀವಾಲ್ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಇದೀಗ ಅವರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ.
ಈ ಹಿಂದೆ ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯ ಕೇಜ್ರೀವಾಲ್ ಗೆ ಜಾಮೀನು ನೀಡಿತ್ತು. ಇದೀಗ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡಲಾಗಿದೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ ಕೇಜ್ರೀವಾಲ್ ಗೆ ಕೆಲವು ನಿಬಂಧನೆಗಳನ್ನು ವಿಧಿಸಿ ಜಾಮೀನು ನೀಡಿದೆ. 10 ಲಕ್ಷ ಮೌಲ್ಯದ ಎರಡು ಬಾಂಡ್ ನೀಡಬೇಕು, ಸಿಎಂ ಕಚೇರಿ ಪ್ರವೇಶ ಮಾಡುವಂತಿಲ್ಲ, ಈ ಕುರಿತು ಯಾವುದೇ ಹೇಳಿಕೆ ನೀಡುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಿದೆ.
