ಹೊಳಲ್ಕೆರೆ: ತಾಲ್ಲೂಕಿನ ಚಿಕ್ಕಜಾಜೂರು ಸಮೀಪದ ಕೋಟೆಹಾಳ್ ಗ್ರಾಮದಲ್ಲಿ 1.66 ಕೋಟಿ ರೂಪಾಯಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, ಹೊಳಲ್ಕೆರೆ ತಾಲ್ಲೂಕಿನಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸಲು ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುತ್ತಿದೆ. ಚೆಕ್ ಡ್ಯಾಂಗಳಲ್ಲಿ ನೀರು ಸಂಗ್ರಹವಾದರೆ ಕೊಳವೆ ಬಾವಿಗಳಲ್ಲಿ ನೀರು ಮರುಪೂರಣವಾಗುತ್ತದೆ. ಆದ್ದರಿಂದ ತಾಲ್ಲೂಕಿನಲ್ಲಿ ಚೆಕ್ ಡ್ಯಾಂಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

