ರಾಜಕೀಯ ಸುದ್ದಿ

ನವಲಗುಂದ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಸಮಿತಿ ಸಭೆ

Share It

ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪಿಸಿ ಶಾಸಕ ಎನ್.ಹೆಚ್. ಕೋನರಡ್ಡಿ.

ಅಣ್ಣಿಗೇರಿ: ಫಲಾನುಭವಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸರ್ಕಾರದ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಬಡವರಿಗೆ ತಲುಪಿಸಬೇಕೆಂದು ಅಧಿಕಾರಿಗಳಿಗೆ ನವಲಗುಂದ ಶಾಸಕ ಎನ್.ಹೆಚ್. ಕೋನರಡ್ಡಿ ಸೂಚಿಸಿದರು.

ಅವರು ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕಿನ ಸರ್ಕಾರದ ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಅಧಿಕಾರಿಗಳೊಂದಿಗೆ ಅಣ್ಣಿಗೇರಿ  ಪಂಪ ಭವನದಲ್ಲಿ ಶುಕ್ರವಾರ  ಸಭೆ ನಡೆಸಿ ಮಾತನಾಡಿದ ಅವರು ಸರ್ಕಾರ 5 ಗ್ಯಾರಂಟಿಗಳನ್ನು ಜಾರಿ ಮಾಡಿ ಸುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಅಭಿನಂದಿಸುತ್ತಾ ರಾಜ್ಯದ ಎಲ್ಲ ಫಲಾನುಭವಿಗಳಿಗೆ ಅಂದಾಜು 60 ಸಾವಿರ ಕೋಟಿ ಹಣವನ್ನು ನೀಡಲಾಗುತ್ತಿದೆ. 

ಗೃಹ ಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿಯೋಜನೆ ಹಾಗೂ ಯುವನಿಧಿ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಜನಪರ ಕೆಲಸ ಸರ್ಕಾರ ಮಾಡಿದೆ. ಈಗಾಗಲೇ ಕೆಲವು ಕಡೆ ಈ.ಕೆ.ವೈ.ಸಿ ಸಮಸ್ಯಯಿಂದ ಕೆಲ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತಿಲ್ಲ ಎಂದು ಸಾರ್ವಜನಿಕರು ನನಗೆ ಮನವಿ ಮಾಡುತ್ತಿದ್ದಾದೆ. ಕೂಡಲೇ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ತಲುಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರೈತರಿಗೆ ಬೀಜ ವಿತರಣೆ: ಅಣ್ಣಿಗೇರಿ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬೇಕಾಗುವ ಹಿಂಗಾರು ಬೆಳೆಗಳಾದ ಕಡಲೆ, ಜೋಳ, ಕುಸಬಿ, ಗೋದಿ ಬೀಜಗಳನ್ನು ನವಲಗುಂದ ಶಾಸಕ ಎನ್.ಹೆಚ್. ಕೋನರಡ್ಡಿ ವಿತರಿಸಿದರು.

ಬೆಣ್ಣೆ ಹಳ್ಳ ಪ್ರವಾಹ ತಡೆಗೆ ಸರ್ಕಾರ 200 ಕೋಟಿ ಖರ್ಚು ಮಾಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿದೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತಿ, ಡಿ.ಕೆ. ಶಿವಕುಮಾರ, ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರು ಹೆಚ್.ಕೆ. ಪಾಟೀಲ, ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಎಸ್.ಆರ್. ಪಾಟೀಲ, ನವಲಗುಂದ ತಾಲ್ಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವರ್ದಮಾನಗೌಡ ಹಿರೆಗೌಡರ, ಅಣ್ಣಿಗೇರಿ ತಾಲ್ಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಂಜುನಾಥ ಮಾಯಣ್ಣವರ, ಜಿಲ್ಲಾ ಕೆ.ಡಿ.ಪಿ ಸಮಿತಿ ಸದಸ್ಯ ಆರ್.ಹೆಚ್. ಕೋನರಡ್ಡಿ, ಹುಬ್ಬಳ್ಳಿ ತಾಲ್ಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಾನಂದ ಭೂಮಣ್ಣವರ, ನವಲಗುಂದ ತಹಶೀಲ್ದಾರ ಸುಧೀರ ಸಾವಕಾರ, ಅಣ್ಣಿಗೇರಿ ತಹಶೀಲ್ದಾರ ಮಂಜುನಾಥ ದಾಸಪ್ಪನವರ, ಹುಬ್ಬಳ್ಳಿ ತಹಶೀಲ್ದಾರ ಪ್ರಕಾಶ ನಾಶಿ, ಕಾರ್ಯನಿರ್ವಾಹಕ ಅಧಿಕಾರಿ, ತಾ.ಪಂ ನವಲಗುಂದ ಶ್ರೀಮತಿ ಭಾಗ್ಯಶ್ರೀ ಜಾಗಿರದಾರ, ಕಾರ್ಯನಿರ್ವಾಹಕ ಅಧಿಕಾರಿ, ತಾ.ಪಂ ಅಣ್ಣಿಗೇರಿ ಯಶವಂತ ಕುಮಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನವಲಗುಂದ ಶ್ರೀಮತಿ ಗಾಯತ್ರಿ ಕೋನರಡ್ಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹುಬ್ಬಳ್ಳಿ ಶ್ರೀಮತಿ ಅತಿಕಾ ಸಿದ್ದಿ, ಹಾಗೂ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕಿನ ಗ್ಯಾರಂಟಿ ಸಮಿತಿಯ ಸದಸ್ಯರು ಉಪಸ್ತಿತರಿದ್ದರು.

Share It

You cannot copy content of this page