ನವದೆಹಲಿ: ದೆಹಲಿ ಮುಖ್ಯ ಮಂತ್ರಿಯಾಗಿ ಅತಿಶಿ ಹೆಸರನ್ನು ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ನೀಡಿದೆ.
ಕೇಜ್ರಿವಾಲ್ ನಿವಾಸದಲ್ಲಿ ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ. ದೆಹಲಿಯ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದರು. ಅವರನ್ನು ಸೆ.13ರಂದಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
ಕೇಜ್ರಿವಾಲ್ ಅನುಪಸ್ಥಿತಿಯಲ್ಲಿ ಬಹುತೇಕ ಇಲಾಖೆಗಳ ಉಸ್ತುವಾರಿಯನ್ನು ಸಚಿವೆ ಅತಿಶಿ ನಿರ್ವಹಿಸಿದ್ದರು. ಕೇಜ್ರಿವಾಲ್ ವಿರುದ್ಧದ ಆರೋಪಗಳನ್ನು ಖಂಡಿಸಿ ಹಲವು ಪ್ರತಿಭಟನೆ ಕೂಡ ಮಾಡಿದ್ದರು.
ಜೈಲಿನಿಂದ ಹೊರಬಂದ ಕೇಜ್ರಿವಾಲ್ ಎರಡು ದಿನದಲ್ಲಿ ರಾಜೀನಾಮ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದು ಸಂಜೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.

