ಅಪರಾಧ ಸುದ್ದಿ

ಶಿವಮೊಗ್ಗ: ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ

Share It

ಶಿವಮೊಗ್ಗ: ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಶಿವಮೊಗ್ಗದಲ್ಲಿ ಶನಿವಾರ ನಡೆದಿದೆ.

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್‌ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆ ಡೊಳ್ಳು ಭಾರಿಸುವ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಸ್ಥಳಕ್ಕೆ ಎಎಸ್ಪಿ ಭೇಟಿ ನೀಡಿ ಪರಿಶೀಲನೆ ಮಾಡಿ 20ಮಂದಿಯನ್ನು ವಶಕ್ಕೆ ಪಡೆದಿದ್ದಾಏ.

ಗಲಾಟೆ ವೇಳೆ ಅರ್ಜುನ್‌ ಎಂಬ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಡಿಸಲು ಹೋದ ಪೋಲಿಸ್ ಪೇದೆಗಳಾದ ನಾಗರಾಜ್ ಮತ್ತು ವಿಶ್ವ ಎಂಬುವರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಬೆನ್ನಲ್ಲೇ ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, ಪೊಲೀಸರು ಎರಡು ಗುಂಪನ್ನ ಚದುರಿಸಿ ಶಾಂತಿ ಕಾಪಾಡಿದ್ದಾರೆ.


Share It

You cannot copy content of this page