ರಾಜಭವನ ತಲುಪಿದ ಕಾಂಗ್ರೆಸ್ ರಾಜಭವನ ಚಲೋ: ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗದ ಮನವಿ ಸಲ್ಲಿಕೆ
ಬೆಂಗಳೂರು: ವಿಧಾನಸೌಧದ ಗಾಂಧಿಭವನದಿಂದ ರಾಜಭವನ ಚಲೋ ಆರಂಭಿಸಿದ ಕಾಂಗ್ರೆಸ್ ನಾಯಕರು, ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಕೆ ಮಾಡುವ ಮೂಲಕ ತಮ್ಮ ಹೋರಾಟ ಅಂತ್ಯಗೊಳಿಸಿದರು.
ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ರಾಜಭವನ ಚಲೋ ಮೆರವಣಿಗೆಯಲ್ಲಿ ಸಚಿವರು, ಶಾಸಕರು ಮತ್ತು ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವಷ್ಟೇ ತರಾತುರಿಯಲ್ಲಿ ಇನ್ನೂ ಕೆಲವು ದೂರಿಗಳಿಗೆ ಸ್ಪಂದಿಸಿಲ್ಲ ಎಂಬ ಬಗ್ಗೆ ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ಮನವರಿಕೆ ಮಾಡಿಕೊಟ್ಟಿತು.
ನಿರಾಣಿ, ಕುಮಾರಸ್ವಾಮಿ, ಜೊಲ್ಲೆ ಪ್ರಕರಣಗಳಲ್ಲಿ ಕೂಡ ಇಂತಹದ್ದೇ ಬದ್ಧತೆ ಪ್ರದರ್ಶನ ಮಾಡುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ಮನವಿ ಮಾಡಿತು. ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ರಾಜ್ಯಪಾಲರು, ಪರಿಶೀಲನೆ ಮಾಡುವ ಭರವಸೆ ನೀಡಿದರು.