ಸುದ್ದಿ

ಜಮ್ಮುವಿನಲ್ಲಿ 14ರಂದು ಪ್ರಧಾನಿ ಮೋದಿ ಚುನಾವಣಾ ಪ್ರಚಾರ

Share It

ಬೆಂಗಳೂರು; ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೆ.14ರಂದು ಚುನಾವಣಾ ಪ್ರಚಾರ ಮಾಡಲಿದ್ದಾರೆ.

ಶುಕ್ರವಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರ ಹಿಡಿದರೆ ಮೆಟ್ರೋ ಸಂಪರ್ಕ ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದ್ದರು..

ಪ್ರತಿ ಕುಟುಂಬದ ಹಿರಿಯ ಮಹಿಳೆಗೆ ಪ್ರತಿ ವರ್ಷ 18,000 ರೂಪಾಯಿ ನೀಡಲು ಬಿಜೆಪಿ ‘ಮಾ ಸಮ್ಮಾನ್ ಯೋಜನೆ’ಯನ್ನು ತರಲಿದೆ ಎಂದು ಅಮಿತ್ ಶಾ ಹೇಳಿದರು. ಬಿಜೆಪಿ ಉಜ್ವಲ ಯೋಜನೆಯಡಿ ವರ್ಷಕ್ಕೆ ಎರಡು ಉಚಿತ ಸಿಲಿಂಡರ್ ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.

ಪ್ರಗತಿ ಶಿಕ್ಷಾ ಯೋಜನೆಯಡಿ ಬಿಜೆಪಿಯು ಪ್ರತಿ ವರ್ಷ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆಯಾಗಿ 3,000 ರೂ. ಉಜ್ವಲ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಎರಡು ಉಚಿತ ಸಿಲಿಂಡರ್‌ಗಳನ್ನು ನೀಡಲಾಗುವುದು ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, 25, ಮತ್ತು ಅಕ್ಟೋಬರ್ 1 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಅಕ್ಟೋಬರ್ 8 ರಂದು ಫಲಿತಾಂಶ ಹೊರಬರಲಿದೆ.


Share It

You cannot copy content of this page