ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಘರ್ಷಣೆ ಖಂಡಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಬೆಂಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.
ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಸ್ಥಳಕ್ಕೆ ಗಣೇಶ ಮೂರ್ತಿ ಸಹಿತ ಬಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು, ಅಲ್ಲದೆ, ಸ್ಥಳದಲ್ಲಿ ಡಿಸಿಪಿ ಶೇಖರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.