ರಾಜಕೀಯ ಸುದ್ದಿ

ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌

Share It

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸೋಮವಾರ ತಡರಾತ್ರಿ ನಗರ ಪ್ರದಕ್ಷಿಣೆ ಮಾಡಿದರು.
ನಗರದ ಹಲವು ರಸ್ತೆಗಳಿಗೆ ಖುದ್ದು ಭೇಟಿ ನೀಡಿದ ಡಿಸಿಎಂ, ಕಾಮಗಾರಿಗಳ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸಿದರು.

ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿ ಪರಿಶೀಲಿಸಿದರು. ಕೆಲ ರಸ್ತೆಗಳಲ್ಲಿ ತಾವೇ ಗಡಾರಿ ಮೂಲಕ ಗುಂಡಿಗೆ ಮುಚ್ಚಿದ್ದ ಡಾಂಬರನ್ನು ಪರಿಶೀಲಿಸಿದರು. ಈ ಮೂಲಕ ಖುದ್ದು ರಸ್ತೆಯ ಗುಂಡಿ ಮುಚ್ಚಿರುವ ಗುಣಮಟ್ಟವನ್ನು ಪರಿಶೀಲಿಸಿ ಖಾತ್ರಿಪಡಿಸಿಕೊಂಡರು.

ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸುವುದು ಈ ಭೇಟಿಯ ಉದ್ದೇಶ. ಜಾಗತಿಕ ನಗರವಾಗಿ ಗುರುತಿಸಿಕೊಂಡಿರುವ ಬೆಂಗಳೂರಿನ ಘನತೆಗೆ ಚ್ಯುತಿ ಬರದಂತೆ ಕಾಪಾಡುವುದೇ ನಮ್ಮ ಧ್ಯೇಯ ಎಂದು ಡಿಸಿಎಂ ಹೇಳಿದರು. ಡಿ.ಕೆ.ಶಿವಕುಮಾರ್‌ ಅವರಿಗೆ ಬಿಬಿಎಂಪಿ‌‌ ಅಧಿಕಾರಿಗಳು ಸಾಥ್ ನೀಡಿದರು.


Share It

You cannot copy content of this page