ಅಪರಾಧ ಸುದ್ದಿ

ಉಡುಪಿನಲ್ಲಿ ನೆಲೆಸಿದ್ದ ಬಾಂಗ್ಲಾ ನುಸುಳುಕೋರರ ಬಂಧನ

Share It


ಉಡುಪಿ; ಉದ್ಯೋಗದ ಕಾರಣಕ್ಕೆ ಬಂದು ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಒಂಬತ್ತು ಜನ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಮಾಣಿಕ್ ಎಂಬ ವ್ಯಕ್ತಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ. ಆಗ ಬಾಂಗ್ಲಾದೇಶದ ಇಮಿಗ್ರಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿತ್ತು. ಜತೆಗೆ ಆತನ ಜತೆಗೆ ಹಲವರು ಉಡುಪಿಯಲ್ಲಿ ನೆಲೆಸಿರುವ ಅನುಮಾನ ಮೂಡಿತ್ತು.

ಹೀಗಾಗಿ, ಕಾರ್ಯಾಚರಣೆ ನಡೆಸಿದ ಪೊಲೀಸರು, ಮಲ್ಪೆಯಲ್ಲಿ ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಸೇರಿ 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ನಕಲಿ ಭಾರತೀಯ ದಾಖಲಾತಿ ಸೃಷ್ಟಿಸಿ ಉಡುಪಿಗೆ ಪ್ರವೇಶಿಸಿದ್ದರು.

ತಪಾಸಣೆ ವೇಳೆ ಆರೋಪಿಗಳ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆರೋಪಿಗಳ ಪೈಕಿ ಸಿಕ್ಕಿಂ ಅಗರ್ತಲಾದ ಕಾಜೋಲ್ ಎಂಬಾತ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದಾನೆಂದು ತಿಳಿದುಬಂದಿದೆ. ಹಾಗೂ ಆರೋಪಿಗಳ ಪೈಕಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ ಎಂದು ತಿಳಿದುಬಂದಿದೆ. ಸದ್ಯ ಮಲ್ಪೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳು ಅರೆಸ್ಟ್ ಆದ ಬೆನ್ನಲ್ಲೇ ಹೆಚ್ಚಿನ ತನಿಖೆಗಾಗಿ ಪೊಲೀಸರ 4 ತಂಡಗಳ ರಚನೆ ಮಾಡಿ ವಿವಿಧ ರಾಜ್ಯಗಳಿಗೆ ಕಳುಹಿಸಿಕೊಡಲಾಗಿತ್ತು. ಚೆನ್ನೈ, ದೆಹಲಿ, ಹೈದರಾಬಾದ್​ಗೆ ತೆರಳಿದ್ದ ಪೊಲೀಸರ ತಂಡ ಮೆಹದಿ ಫೌಂಡೇಷನ್ ಸಂಪರ್ಕದಲ್ಲಿದ್ದ ಒಟ್ಟು 22 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಮೆಹದಿ ಫೌಂಡೇಶನ್‌ನ ಭಾರತದ ಉಸ್ತುವಾರಿ ಹೊಣೆ ಹೊತ್ತಿದ್ದ ಉತ್ತರಪ್ರದೇಶ ಮೂಲದ ಪರ್ವೇಜ್‌ ಅಹಮದ್‌ (55) ಪಾಕ್‌ ಪ್ರಜೆಗಳನ್ನು ಅಕ್ರಮವಾಗಿ ನೆಲೆಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಈತ ಯಾರ ಬಳಿಯಿಂದ ಪಾಕ್‌ ಪ್ರಜೆಗಳಿಗೆ ಪಾಸ್‌ಪೋರ್ಟ್‌, ಆಧಾರ್‌ ಕಾರ್ಡ್‌ ಮಾಡಿಸಿಕೊಡುತ್ತಿದ್ದ ಎಂಬುದೂ ಸೇರಿ ಇನ್ನಿತರೆ ವಿಚಾರಗಳ ಕುರಿತು ವಿಸ್ತೃತ ತನಿಖೆ ನಡೆಯುತ್ತಿದೆ.


Share It

You cannot copy content of this page