ಚಿಕ್ಕಮಗಳೂರು: ವಯನಾಡಿನಲ್ಲಿ ಗುಡ್ಡ ಕುಸಿತದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಮಲೆನಾಡು ಭಾಗದ ಅಪಾಯಕಾರಿ ಸ್ಥಳಗಳ ಪಟ್ಟಿ ಕೇಳಿತ್ತು. ನಂತರ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ತಂಡ ವಿವಿಧ ಸ್ಥಳಗಳನ್ನು ಪರಿಶೀಲನೆ ಮಾಡಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದೆ.
ಚಿಕ್ಕಮಗಳೂರು ಜಿಲ್ಲಾಡಳಿತ 77 ಅಪಾಯಕಾರಿ ಸ್ಥಳಗಳನ್ನು ಗುರುತು ಮಾಡಿ ವರದಿ ಕಳುಹಿಸಿತ್ತು. ಆಗಸ್ಟ್ನಲ್ಲಿ ಚಂದ್ರದ್ರೋಣ ಪರ್ವತಗಳ ಸಾಲಿನ ಕವಿಕಲ್ ಗಂಡಿ, ಮುಳ್ಳಯ್ಯನಗಿರಿ ಮಾರ್ಗ, ದತ್ತಪೀಠ ಸೇರಿದಂತೆ ಅನೇಕ ಕಡೆಗಳಲ್ಲಿ ತಂಡ ಪರಿಶೀಲನೆ ನಡೆಸಿತ್ತು. ಇದೀಗ ವರದಿ ನೀಡಿದ್ದು, ಹಲವು ಕಟ್ಟುಪಾಡುಗಳನ್ನು ಅನುಸರಿಸಲು ಸೂಚಿಸಿದೆ
ಅವೈಜ್ಞಾನಿಕ ಕಾಮಗಾರಿ, ವಾಹನಗಳ ದಟ್ಟನೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತವಾಗುತ್ತಿದೆ. ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲು, ಚಾರ್ಮಾಡಿ ಘಾಟ್ ಡೇಂಜರ್ ಝೂನ್ ಆಗಿದೆ. ಹೀಗಾಗಿ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟನೆ ನಿಲ್ಲಿಸುವಂತೆ ಜಿಯೋಲಾಜಿಕಲ್ ಸರ್ವೇ ತಂಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
ಶೇ.80ರಷ್ಟು ಅವೈಜ್ಞಾನಿಕ ಕಾಮಗಾರಿಯಿಂದಲೇ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಕುಸಿತ ಉಂಟಾಗುತ್ತಿದೆ ಎಂಬ ಅಂಶ ಪತ್ತೆಯಾಗಿದೆ.
ಜಿಯೋಲಾಜಿಕಲ್ ಸರ್ವೇ ಟೀಮ್, ಚಿಕ್ಕಮಗಳೂರು ಜಿಲ್ಲೆಯ 88 ಡೇಂಜರಸ್ ಸ್ಥಳಗಳ ವರದಿ ನೀಡಿದೆ.
ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿ ಮಾಡದೆ ಅವಾಂತರ ಎಂದು ವರದಿ ನೀಡಿದೆ. ಅತಿಹೆಚ್ಚು ಕಾಮಗಾರಿಗಳಿಂದ ಪಶ್ಚಿಮ ಘಟ್ಟಗಳ ಸಾಲಿಗೆ ಹಾನಿಯಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ಗೆ ವರದಿ ಸಲ್ಲಿಸಲಾಗಿದೆ.