ಉಪಯುಕ್ತ ಸುದ್ದಿ

ಕಸ್ತೂರಿ ರಂಗನ್ ವರದಿ ಅನುಷ್ಠಾನ ಚರ್ಚೆ: ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಶಾಸಕರ ಸಭೆ

Share It

ಬೆಂಗಳೂರು: ಪಶ್ಚಿಮ ಘಟ್ಟಗಳ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ಅನಿಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಚರ್ಚೆ ನಡೆಸುತ್ತಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ಸಭೆಯಲ್ಲಿ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಸಚಿವರು, ಶಾಸಕರು, ಭಾಗವಹಿಸಿದ್ದಾರೆ. ಸಚಿವರಾದ ಕೆ.ಜೆ.ಜಾರ್ಜ್‌, ಸತೀಶ್ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ, ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಸಮಿತಿಯ ಅಧ್ಯಕ್ಷ ಪ್ರಾಣೇಶ್ ಭಾಗವಹಿಸಿದ್ದಾರೆ.

ಪಶ್ಚಿಮಘಟ್ಟಗಳ ವ್ಯಾಪ್ತಿಯ ಹನ್ನೊಂದು ಜಿಲ್ಲೆ 39 ತಾಲೂಕು ವ್ಯಾಪ್ತಿಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಲೋಕಸಭಾ ಸದಸ್ಯರು ಭಾಗವಹಿಸಿದ್ದರು.

ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿ 20 ಸಾವಿರ ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಣಮದು ಘೋಷಿಸಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಸಲಹೆ ಕೇಳಿದ್ದು, ಇದಕ್ಕಾಗಿ ಸಂಪುಟ ಉಪಸಮಿತಿ ಚರ್ಚೆ ನಡೆಸಿದ್ದು, ಇದೀಗ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ.


Share It

You cannot copy content of this page