ಮುಸ್ಲಿಂ ಧರ್ಮಗಳಿಂದ ಸಿಎಂ ಸಿದ್ದರಾಮಯ್ಯ ಭೇಟಿ: ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಮನವಿ
ಬೆಂಗಳೂರು: ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.
ಈ ವೇಳೆ ಕೇಂದ್ರ ಸರ್ಕಾರ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಕಾಯ್ದೆ-2024 ರ ಕುರಿತಂತೆ ತಮ್ಮ ಕಾಳಜಿಗಳನ್ನು ವ್ಯಕ್ತಪಡಿಸಿ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಮುಸ್ಲಿಂ ಸಮುದಾಯಗಳ ಅಭಿವೃದ್ಧಿಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.