ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ: ಮೂವರು ನಾಪತ್ತೆ

Share It

ಬೆಂಗಳೂರು: ಗುಜರಾತ್‌ನ ಪೋರಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸಹಾಯಕ್ಕಾಗಿ ತೆರಳಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರದಲ್ಲಿ ಮುಳುಗಿದ್ದು, ಇಬ್ಬರು ಪೈಲಟ್‌ಗಳು ಮತ್ತು ಡೈವರ್ ಸೇರಿದಂತೆ ಮೂವರು ನಾಪತ್ತೆಯಾಗಿದ್ದಾರೆ.
ಹೆಲಿಕಾಪ್ಟರ್‌ನಲ್ಲಿ ನಾಲ್ವರು ಜನರಿದ್ದು, ಒಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಹೆಲಿಕಾಪ್ಟರ್ ಅವಶೇಷಗಳೂ ಪತ್ತೆಯಾಗಿವೆ. ರಕ್ಷಿಸಲ್ಪಟ್ಟ ವ್ಯಕ್ತಿಯೂ ಡೈವರ್ ಆಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ.

ಅರಬ್ಬಿ ಸಮುದ್ರದಲ್ಲಿ ಸಿಲುಕಿರುವ ಹಡಗಿನಿಂದ ಸಹಾಯಕ್ಕಾಗಿ ಸಂದೇಶ ಕಳುಹಿಸಿದಾಗ ಈ ಅವಘಡ ಸಂಭವಿಸಿದೆ ಎಂದು ಕೋಸ್ಟ್ ಗಾರ್ಡ್ ಹೇಳಿದೆ. ಹಡಗಿನಿಂದ ಜನರನ್ನು ಸ್ಥಳಾಂತರಿಸಬೇಕಾಗಿತ್ತು ಮತ್ತು ಈ ಸಮಯದಲ್ಲಿ, ಹೆಲಿಕಾಪ್ಟರ್ ಅಲ್ಲಿಗೆ ತಲುಪಿದಾಗ, ಪತನವಾಗಿದೆ.

ಸದ್ಯ ನಾಪತ್ತೆಯಾಗಿರುವ ಇಬ್ಬರು ಪೈಲಟ್‌ ಮತ್ತು ಡೈವರ್‌ಗಳ ಪತ್ತೆಗಾಗಿ ಶೋಧ ಆರಂಭಿಸಲಾಗಿದೆ. ಕೋಸ್ಟ್ ಗಾರ್ಡ್ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳನ್ನು ಶೋಧ ಕಾರ್ಯಾಚರಣೆಗೆ ನಿಯೋಜಿಸಿದೆ.


Share It

You May Have Missed

You cannot copy content of this page