ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಕೆಐಎಡಿಬಿಯಿಂದ ಬೇರೆಯವರ ಹೆಸರಲ್ಲಿ ಭೂಮಿ ಪಡೆದು ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಲೀಂ ಅಹ್ಮದ್ ನೇತೃತ್ವದ ಕಾಂಗ್ರೆಸ್ ಸದಸ್ಯರ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.
ನಿಯೋಗದಲ್ಲಿ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ವಸಂತ ಕುಮಾರ್, ಪುಟ್ಟಣ್ಣ, ರವಿ, ಉಮಾಶ್ರೀ ಹಾಗೂ ಸುಧಾಮ್ ದಾಸ್, ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.


