ದಾವಣಗೆರೆ: ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದ ಏಳು ಜನರ ಪೈಕಿ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹೊನ್ನಾಳಿ ತಾಲೂಕಿನ ಹುಣಸೇಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಸಾಎವನೆಯಿಂದ ವಾಂತಿ ಭೇದಿ ಕಾಣಿಕೊಂಡು ಹಲವಾರು ಜನ ಅಸ್ವಸ್ಥರಾಗಿದ್ದರು. ಅನೇಕರನ್ನು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಅದರಲ್ಲಿ ಏಳು ಜನರ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ, ಆ ಏಳು ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಚಂದ್ರಮ್ಮ ಎಂಬ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮಹಿಳೆಗೆ ಕಲುಷಿತ ನೀರು ಸಡವನೆ ಪರಿಣಾಮ ಆರೋಗ್ಯ ಹಾಳಾಗಿತ್ತು. ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ಜತೆಗೆ ಅಂಗಾಗ ವೈಫಲ್ಯದಿಂದ ಆಕೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವೃದ್ಧೆ ಸಾವಿನಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು, ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

