ಅಪರಾಧ ಸುದ್ದಿ

ಕೊಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ: ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ವಿಚಾರಣೆ

Share It

ನವದೆಹಲಿ: ಕೋಲ್ಕತ್ತಾದ ಆರ್‌.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಟ್ರೈನಿ ವೈದ್ಯೆಯ ಕೊಲೆ ಮತ್ತು ಅತ್ಯಾಚಾರಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ನಾಳೆ ವಿಚಾರಣೆ ನಡೆಯಲಿದೆ.

ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದ್ದು, ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವೇ ವಿಚಾರಣೆ ಕೈಗೆತ್ತಿಗೊಳ್ಳಲಿದೆ.

ಆಗಸ್ಟ್ 9ರಂದು 31 ವರ್ಷದ ವೈದ್ಯೆಯ ಅತ್ಯಾಚಾರ-ಕೊಲೆ ನಡೆದಿತ್ತು. ನಂತರ ದೇಶಾದ್ಯಂತ ವೈದ್ಯರು ನ್ಯಾಯಕ್ಕಾಗಿ ಮುಷ್ಕರ ಕೈಗೊಂಡಿದ್ದಾರೆ. ಪ್ರಸ್ತುತ ಸಿಬಿಐ ಸಮಗ್ರ ತನಿಖೆ ನಡೆಸುತ್ತಿದೆ. ಈ ನಡುವೆ ಸುಪ್ರೀಂ ಕೋರ್ಟ್ ಸ್ವಯಂಚಾಲಿತವಾಗಿ ವಿಚಾರಣೆಗೆ ಮುಂದಾಗಿದೆ.


Share It

You cannot copy content of this page