ರಾಜಕೀಯ ಸುದ್ದಿ

ಯುವ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಜಗದೀಶ್ ನೇಮಕ: ಹೆಚ್ ಡಿ ಕುಮಾರಸ್ವಾಮಿ ಆದೇಶ 

Share It

ಬೆಂಗಳೂರು: ರಾಜ್ಯ ಜನತಾದಳ ಯುವ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಶ್ರವಣ ಬೆಳಗೊಳ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಪಿ. ಜೆ ಜಗದೀಶ್ ಅವರನ್ನು ನೇಮಿಸಲಾಗಿದೆ. 

ಮಾಜಿ ಮುಖ್ಯಮಂತ್ರಿ ಹಾಗು ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಶ್ರವಣ ಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಅವರ ಶಿಫಾರಸಿನ ಮೇರೆಗೆ ಆದೇಶ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಈ ಕುರಿರು ಪತ್ರದ ಮೂಲಕ ಜಗದೀಶ್ ಅವರಿಗೆ ಶುಭ ಕೋರಿರುವ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಆದ ಕುಮಾರಸ್ವಾಮಿ ಅವರು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧವಾಗಿ ರಾಜ್ಯಾದ್ಯಂತ ಪಕ್ಷದ ಸಂಘಟನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ಜಗದೀಶ್ ಅವರಿಗೆ ಗುರುತರವಾದ ಜವಾಬ್ದಾರಿಯನ್ನು ನೀಡಿದ್ದಾರೆ. 

ಈ ಕುರಿತು ಒರಟಿಕ್ರಿಯೆ ನೀಡಿರುವ ಜಗದೀಶ್ ಅವರು, ನನ್ನ ಸಾಮರ್ಥ್ಯವನ್ನು ಗುರುತಿಸಿ ನಮ್ಮ ಶಾಸಕರಾದ ಬಾಲಕೃಷ್ಣ ಅವರು ನನ್ನನ್ನು ಇಂತಹ ಗುರುತರ ಹುದ್ದೆಗೆ ಶಿಫಾರಸ್ಸು ಮಾಡಿದ್ದು, ನನ್ನನ್ನು ಹುದ್ದೆಗೆ ನೇಮಿಸಿದ ಕೇಂದ್ರ ಸಚಿವರಾದ ಕುಮಾರಣ್ಣ ನವರಿಗೆ ಧನ್ಯವಾದ ಅರ್ಪಿಸುತ್ತೇನೆ. ಪಕ್ಷದ ಆಶಯದಂತೆ ನಾನು ಕೆಲಸ ಮಾಡಿ, ಸಂಘಟನೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಜಗದೀಶ್ ಅವರು ಶ್ರವಣ ಬೆಳಗೊಳ ಕ್ಷೇತ್ರದ ಪೂಮಾಡಿಹಳ್ಳಿ ಗ್ರಾಮದವರಾಗಿದ್ದು, ಹಲವು ವರ್ಷಗಳಿಂದ ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಯುವ ನಾಯಕರಾಗಿದ್ದಾರೆ. ಸಮಾಜ ಸೇವೆ ಮತ್ತು ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಪಕ್ಷ ಸಂಘಟನೆ ಮಾಡಿ, ಇದೀಗ ರಾಜ್ಯ ಸಂಘಟನಾ ಕಾರ್ಯದರ್ಶಿಯಂತಹ ಮಹತ್ವದ ಹುದ್ದೆ ಪಡ್ವದುಕೊಂಡಿದ್ದಾರೆ. 


Share It

You cannot copy content of this page