ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳ ತನಿಖೆಗೆ ರಚಿಸಿರುವ ಡಾ.ಜಿ.ಪರಮೇಶ್ವರ್ ನೇತೃತ್ವದ ಸಮಿತಿ ಶುಕ್ರವಾರ ಸಭೆ ನಡೆಸಿತು.
ಈ ತಂಡ ಇಲಾಖಾವಾರು ಹಗರಣಗಳನ್ನು ಪರಿಶೀಲಿಸಲಿದೆ. ಇನ್ನೂ ಎರಡು ತಿಂಗಳಲ್ಲಿ ಕಾರ್ಯವನ್ನು ಪೂರ್ಣಗೊಳಿಸಲಿದ್ದು, ಅಂತಿಮ ನಿರ್ಧಾರ ತೆಗೆದುಕೊಳ್ಳಲು ಕ್ಯಾಬಿನೆಟ್ ಮುಂದೆ ವರದಿ ಮುಂದಿಡಲಾಗುವುದು ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಐವರು ಸದಸ್ಯರ ಸಮಿತಿಯು ತಾರ್ಕಿಕ ಘಟ್ಟಕ್ಕೆ ಕೊಂಡೊಯ್ಯಲಿದೆ ಎಂದು ಗೃಹ ಸಚಿವರು ತಿಳಿಸಿದರು.
ಸಭೆಯಲ್ಲಿ ಹಲವು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆ ಮುಗಿದ ನಂತರ ಸಚಿವರು ಪ್ರತ್ಯೇಕವಾಗಿ ಸಭೆ ನಡೆಸಿದರು. ತನಿಖೆ ಪೂರ್ಣಗೊಂಡ ಪ್ರಕರಣಗಳನ್ನು ನಾವು ಮುಟ್ಟುವುದಿಲ್ಲ, ಆದರೆ ತನಿಖೆ ನಡೆಯುತ್ತಿರುವ ಪ್ರಕರಣಗಳನ್ನು ಮಾತ್ರ ಪರಿಶೀಲಿಸುತ್ತೇವೆ. ಹೊಸ ಹಗರಣಗಳನ್ನು ಸಹ ಪರಿಶೀಲಿಸುತ್ತೇವೆ. ಇಂದು 3-4 ಪ್ರಕರಣಗಳನ್ನು ಚರ್ಚಿಸಿದ್ದೇವೆ ಎಂದು ಡಾ ಪರಮೇಶ್ವರ್ ಹೇಳಿದರು.
ತಂಡ ಇಲಾಖಾವಾರು ಹಗರಣಗಳನ್ನು ಪರಿಶೀಲಿಸಲಿದೆ. ಇನ್ನೂ ಎರಡು ತಿಂಗಳಲ್ಲಿ ಕಾರ್ಯವನ್ನು ಪೂರ್ಣಗೊಳಿಸಲಿದ್ದು, ಅಂತಿಮ ನಿರ್ಧಾರ ತೆಗೆದುಕೊಳ್ಳಲು ಕ್ಯಾಬಿನೆಟ್ ಮುಂದೆ ವರದಿ ಮುಂದಿಡಲಾಗುವುದು ಎಂದರು.
ಬಿಜೆಪಿ ಆಡಳಿತ ಮತ್ತು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲಾ ಅಕ್ರಮಗಳ ಬಗ್ಗೆ ತನಿಖೆ ನಡೆಸುವುದಿಲ್ಲ. ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹಗರಣಗಳು ಮತ್ತು ಅವುಗಳ ಪ್ರಗತಿಯ ಬಗ್ಗೆ ಚರ್ಚಿಸಲಾಗಿದೆ. ಆದರೆ ಇದು ಮೊದಲ ಸಭೆಯಾಗಿರುವುದರಿಂದ ಸಮಿತಿಯು ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಅವರು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಚಿಸಿರುವ ಪರಮೇಶ್ವರ್ ನೇತೃತ್ವದ ಸಮಿತಿಯಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ ಮತ್ತು ಎಚ್‌ಕೆ ಪಾಟೀಲ್ ಕೂಡ ಇದ್ದಾರೆ.