ಬೆಂಗಳೂರು: ಕೆ.ವಿ.ಶರತ್ ಚಂದ್ರ ಮತ್ತು ಹೇಮಂತ್ ನಿಂಬಾಳ್ಕರ್ ಅವರನ್ನು ಹೆಚ್ಚುವರಿ ಹೊಣೆಗಾರಿಕೆ ಜತೆಗೆ ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ.
ಕೆ.ವಿ.ಶರತ್ ಚಂದ್ರ ನೇಮಕಾತಿ ವಿಭಾಗದ ಎಡಿಜಿಪಿ ಹುದ್ದೆಯ ಜತೆಗೆ ಸಂಚಾರ ಮತ್ತು ಸುರಕ್ಷತಾ ವಿಭಾಗದ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಹೇಮಂತ್ ನಿಂಬಾಳ್ಕರ್ ಅವರು, ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಯ ಜತೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ.
