ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಉಗ್ರಸ್ವರೂಪ ಪಡೆದುಕೊಂಡಿದ್ದು, ಲಾಠಿ ಚಾರ್ಜ್, ಟಿಯರ್ ಗ್ಯಾಸ್ ಪ್ರಯೋಗ ಮಾಡಲಾಯಿತು. ಇದ್ರಿಂದ ಪ್ರತಿಭಟನೆ ಬೇರೆಯದ್ದೇ ಸ್ವರೂಪ ಪಡೆದುಕೊಂಡಿತು. ಪೊಲೀಸರು ಸಿಕ್ಕ ಸಿಕ್ಕ ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಲಾಠಿ ಬೀಸಿದರು
ಪೊಲೀಸರ ಜತೆಗೆ ಖಾಸಗಿ ವ್ಯಕ್ತಿಗಳು ಸೇರಿಕೊಂಡು ಯುವಕರ ಮೇಲೆ ದಾಳಿ ಮಾಡಿದರು ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ. ಪೊಲೀಸರು ಗುಂಡಗಳ ರೀತಿ ವರ್ತನೆ ಮಾಡಿದ್ದು, ರಕ್ತ ಸುರಿಯುತ್ತಿದ್ದರೂ ಕೆಲವು ಯುವಕರನ್ನು ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಆಕ್ರೋಶ ವ್ಯಕ್ತವಾಗಿದೆ.

