ಮಿರ್ಜಾಪುರ: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ ಕಾರೊಂದು ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ರಾಜ್ಯದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಉತ್ತರ ಪ್ರದೇಶದ ಮಿರ್ಜಾಪುರ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ರಾಜ್ಯದ ರಾಮಕೃಷ್ಣ ಶರ್ಮಾ, ಮತ್ತು ಅರುಣ್ ಶಾಸ್ತಿç ಎಂಬ ಯುವಕರು ಗಂಭಿರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಯುವಕರು ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಕೆಆರ್‌ಎಸ್ ನಿವಾಸಿಗಳು ಎನ್ನಲಾಗಿದ್ದು, ಅವರ ಮೃತದೇಹಗಳನ್ನು ರಾಜ್ಯಕ್ಕೆ ತರಿಸಿಕೊಳ್ಳುವ ಪ್ರಯತ್ನ ನಡೆದಿದೆ.