ಚಂಡಮಾರುತ: ರಾಜ್ಯದಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಮಾನ ಇಲಾಖೆ
ಬೆಂಗಳೂರು: ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ.
ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ನ.9ರ ಬಳಿಕ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕಾರ್ಕಳ, ಶಿರಾಲಿ, ಧರ್ಮಸ್ಥಳ, ಕೊಟ್ಟಿಗೆಹಾರ, ಭಾಗಮಂಡಲ, ಉಪ್ಪಿನಂಗಡಿ, ಪುತ್ತೂರು, ಉಡುಪಿ, ಮಾಣಿ, ಸೋಮವಾರಪೇಟೆ, ಪೊನ್ನಂಪೇಟೆ, ಶೃಂಗೇರಿಯಲ್ಲಿ ಮಳೆಯಾಗಿದೆ.


