ಬಿಬಿಎಂಪಿಗೆ ತುಷಾರ್ ಗಿರಿನಾಥ್ ಆಡಳಿತಾಧಿಕಾರಿ, ಮಹೇಶ್ವರ ರಾವ್ ಮುಖ್ಯ ಆಯುಕ್ತರು
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ. ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿದೆ. ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ನೇಮಕ ಮಾಡುವ ಮೂಲಕ ಹೆಚ್ಚುವರಿ ಹೊಣೆ ನೀಡಲಾಗಿದೆ.
ತುಷಾರ್ ಗಿರಿನಾಥ್ ಅವರು ಕಳೆದ ಎರಡೂವರೆ ವರ್ಷಗಳಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತುಷಾರ್ ಗಿರಿನಾಥ್ ಅವರು ಈ ಹಿಂದೆ ಬೆಸ್ಕಾಂ ಮತ್ತು ಬಿಡಬ್ಲ್ಯೂಎಸ್ಎಸ್ಬಿ ಮುಖ್ಯಸ್ಥರಾಗಿದ್ದರು.


